ಸೋಮವಾರಪೇಟೆ, ಡಿ. ೨೪: ರಾಜ್ಯದ ಇತರ ಜಿಲ್ಲೆಗಳಲ್ಲಿ ರೈತರ ೧೦ ಹೆಚ್.ಪಿ.ವರೆಗಿನ ಪಂಪ್‌ಸೆಟ್ ಗಳಿಗೆ ಸರ್ಕಾರ ಉಚಿತ ವಿದ್ಯುತ್ ಒದಗಿಸಿದ್ದು, ಇದನ್ನು ಕೊಡಗು ಜಿಲ್ಲೆಗೂ ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲೆಯ ಶಾಸಕರುಗಳಾದ ಎಂ.ಪಿ. ಅಪ್ಪಚ್ಚುರಂಜನ್ ಹಾಗೂ ಕೆ.ಜಿ. ಬೋಪಯ್ಯ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದು, ಪೂರಕ ಸ್ಪಂದನ ದೊರೆತಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಭಾಗಿಯಾಗಿರುವ ಶಾಸಕದ್ವಯರು, ಈ ಸಂಬAಧಿತ ಮನವಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ ಹಿನ್ನೆಲೆ, ಮಂಜೂರಾತಿ ನೀಡಲು ಕಡತ ಮಂಡಿಸುವAತೆ ಮುಖ್ಯಮಂತ್ರಿಗಳು ರಾಜ್ಯ ಇಂಧನ ಇಲಾಖೆಗೆ ಸೂಚಿಸಿದ್ದಾರೆ. ಆ ಮೂಲಕ ಕೊಡಗಿನ ರೈತರ ಪ್ರಮುಖ ಬೇಡಿಕೆಯೊಂದು ಈಡೇರುವ ಭರವಸೆ ಮೂಡಿದೆ.

ಕೊಡಗಿನ ರೈತರು ಕೃಷಿ ಉದ್ದೇಶಕ್ಕೆ ಅಳವಡಿಸಿಕೊಂಡಿರುವ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಇಲಾಖೆ ಶುಲ್ಕ ವಿಧಿಸಿದ್ದು, ಶುಲ್ಕ ಪಾವತಿಸದೆ ಇರುವವರಿಗೆ ಭಾರೀ ಪ್ರಮಾಣದ ದಂಡವನ್ನೂ ಹಾಕಲಾಗಿದೆ. ಈ ನಡುವೆ ಬಿಲ್ ಪಾವತಿಸದ ರೈತರ ವಿದ್ಯುತ್ ಸಂಪರ್ಕವನ್ನು ಕಡಿತ ಗೊಳಿಸುವ

(ಮೊದಲ ಪುಟದಿಂದ) ಪ್ರಯತ್ನಗಳೂ ನಡೆದಿದ್ದು, ರೈತರು ಹಾಗೂ ವಿದ್ಯುತ್ ಇಲಾಖೆಯ ನಡುವೆ ಶೀತಲ ಸಮರ ಮುಂದುವರೆದಿದೆ.

ಇದರ ಮುಂದುವರೆದ ಭಾಗವಾಗಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸೋಮವಾರಪೇಟೆಯ ಜೇಸೀ ವೇದಿಕೆಯಲ್ಲಿ ಕಳೆದ ೧೧ ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ವಿದ್ಯುತ್ ಸಮಸ್ಯೆಯನ್ನು ಸದನದಲ್ಲಿಯೇ ಬಗೆಹರಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಈ ಧರಣಿಯ ಮಾಹಿತಿಯನ್ನು ಪಡೆದಿರುವ ಶಾಸಕರುಗಳು, ಈಗಾಗಲೇ ರಾಜ್ಯ ಇಂಧನ ಸಚಿವ ಸುನಿಲ್‌ಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಇದೀಗ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಮಂಜೂರಾತಿಗಾಗಿ ಕಡತವನ್ನು ಮಂಡಿಸುವAತೆ ಮುಖ್ಯಮಂತ್ರಿಗಳು ಇಂಧನ ಇಲಾಖೆಗೆ ಸೂಚನೆ ನೀಡಿದ್ದಾರೆ.

ಶಾಸಕದ್ವಯರ ಪತ್ರದ ಸಾರಾಂಶ: ಕೊಡಗು ಜಿಲ್ಲೆಯನ್ನು ಹೊರತು ಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಕಾಫಿ ಹಾಗೂ ಟೀ ಬೆಳೆಯುವ ಸಣ್ಣ ಮತ್ತು ಮಧ್ಯಮ ರೈತರಿಗೆ ಮಾತ್ರ ಈ ಸೌಲಭ್ಯ ಕಲ್ಪಿಸದಿರುವುದು ವಿಷಾದನೀಯ. ಕೊಡಗು ಜಿಲ್ಲೆಯಲ್ಲಿ ಕಳೆದ ೩ ವರ್ಷಗಳಿಂದ ಜಲ ಪ್ರಳಯ ಉಂಟಾಗಿ ರೈತರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಸರ್ಕಾರ ನಿಲ್ಲಬೇಕಿದೆ.

೨೦೨೦-೨೧ನೇ ಸಾಲಿನ ಆಯವ್ಯಯದಲ್ಲಿ ಕ್ರಮ ಸಂಖ್ಯೆ: ೧೯೭ರಲ್ಲಿ ಸಣ್ಣ ಮತ್ತು ಮಧ್ಯಮ ಕಾಫಿ ಹಾಗೂ ಟೀ ಬೆಳೆಯುವ ರೈತರ ಪಂಪ್‌ಸೆಟ್‌ಗಳಿಗೆ ೧೦ ಹೆಚ್.ಪಿ. ವರೆಗೆ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಸರ್ಕಾರ ನೀಡಿತ್ತು. ಆದರೆ ಆ ಭರವಸೆಯಂತೆ ಈವರೆಗೆ ಅಗತ್ಯ ಆದೇಶ ಹೊರಡಿಸಿರುವುದಿಲ್ಲ. ಆದ್ದರಿಂದ ರಾಜ್ಯದ ಬೇರೆ ಜಿಲ್ಲೆಗಳ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿರುವ ರೀತಿಯಲ್ಲೇ ಕೊಡಗು ಜಿಲ್ಲೆಯಲ್ಲಿ ಕಾಫಿ ಮತ್ತು ಟೀ ಬೆಳೆಯುವ ಸಣ್ಣ ಮತ್ತು ಮಧ್ಯಮ ರೈತರಿಗೂ ಸಹ, ಅವರು ಉಪಯೋಗಿಸುವ ೧೦ ಹೆಚ್.ಪಿ.ವರೆಗಿನ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಿ, ಆದೇಶ ಹೊರಡಿಸುವಂತೆ ಸಂಬAಧಪಟ್ಟವರಿಗೆ ಸೂಚನೆ ನೀಡಬೇಕೆಂದು ಶಾಸಕರುಗಳು, ರಾಜ್ಯದ ಮುಖ್ಯಮಂತ್ರಿಯನ್ನು ಕೋರಿದ್ದಾರೆ.

ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಮಂಜೂರಾತಿ ಗಾಗಿ ಈ ಸಂಬAಧಿತ ಕಡತವನ್ನು ಮಂಡಿಸುವAತೆ ಇಂಧನ ಇಲಾಖೆಗೆ ಸೂಚನೆ ನೀಡಿದ್ದಾರೆ.

೧೧ ದಿನ ಪೂರೈಸಿದ ರೈತರ ಧರಣಿ: ಈ ನಡುವೆ ೧೦ ಹೆಚ್.ಪಿ.ವರೆಗಿನ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟು ಪಟ್ಟಣದ ಜೇಸೀ ವೇದಿಕೆಯಲ್ಲಿ ನಡೆಯುತ್ತಿರುವ ಧರಣಿ ೧೧ ದಿನ ಪೂರೈಸಿದೆ.

ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ಗ್ರಾಮೀಣ ಭಾಗದಿಂದ ರೈತರು ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದರೊಂದಿಗೆ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳೂ ಸಹ ಧರಣಿಯಲ್ಲಿ ಭಾಗಿಯಾಗಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

೧೧ನೇ ದಿನದ ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ದಿನೇಶ್, ಸಂಚಾಲಕ ಲಕ್ಷö್ಮಣ್, ಪದಾಧಿಕಾರಿ ಗಳಾದ ಕುಶಾಲಪ್ಪ, ಅಜ್ಜಳ್ಳಿ ನವೀನ್, ಮೊಗಪ್ಪ, ಮಚ್ಚಂಡ ಅಶೋಕ್, ಕಿಬ್ಬೆಟ್ಟ ಧರ್ಮ, ಹೂವಯ್ಯ, ದಸಂಸ ಮುಖಂಡ ಕೆ.ಬಿ. ರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.