ಸಿದ್ದಾಪುರ, ಡಿ ೨೩: ಅಮ್ಮತ್ತಿ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಇದೀಗ ರಸ್ತೆ ದುರಸ್ತಿ ಕಾಮಗಾರಿಯನ್ನು ಪ್ರಾರಂಭಿಸಿದೆ.
ಅಮ್ಮತ್ತಿ ಪಟ್ಟಣ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳು ತೀವ್ರವಾಗಿ ಹದಗೆಟ್ಟಿದ್ದು, ಅಲ್ಲದೇ ವಾಹನ ಸಂಚರಿಸಲು ಸಾಧ್ಯವಿಲ್ಲದೇ, ವಾಹನ ಚಾಲಕರು ಸಮಸ್ಯೆಗೆ ಸಿಲುಕಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅಮ್ಮತ್ತಿ ಆಟೋ ಚಾಲಕರ ಹಾಗೂ ಮಾಲಿಕರ ಸಂಘದಿAದ ಕಳೆದೆರಡು ದಿನಗಳಲ್ಲಿ ರಸ್ತೆ ದುರಸ್ತಿಪಡಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಇದೀಗ ರಸ್ತೆಯಲ್ಲಿ ಇರುವ ಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನು ಪ್ರಾರಂಭಿಸಿದ್ದಾರೆ.