ಕೂಡಿಗೆ, ಡಿ. ೨೪: ಕೂಡಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ ತಂಡದ ವತಿಯಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ ಸುಜಾ ಕುಶಾಲಪ್ಪ ಅವರನ್ನು ಕೂಡಿಗೆಯ ವಿಜಯ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಿಕಟಪೂರ್ವ ಅಧ್ಯಕ್ಷ ಬಿ.ಬಿ. ಭಾರತೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಶ್ರೀನಿವಾಸ , ಮಂಜುಳಾ ಸೇರಿದಂತೆ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಉಪಾಧ್ಯಕ್ಷ ಬಾಸ್ಕರ್ ನಾಯಕ್, ಉದ್ಯಮಿ ಕಿಶೋರ್ ಕುಮಾರ್ ಮತ್ತಿತರರು ಇದ್ದರು.