ಮಡಿಕೇರಿ, ಡಿ. ೨೪: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಜನಪದ ಪತ್ತಿನ ಸಹಕಾರ ಸಂಘದ ಉದ್ಘಾಟನೆ ತಾ. ೨೬ರಂದು ಬೆಳಿಗ್ಗೆ ೧೧ ಗಂಟೆಗೆ ಗೋಣಿಕೊಪ್ಪಲು

ಉಮಾಮಹೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಸುಜಾ ಕುಶಾಲಪ್ಪ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಜಿ. ಕತ್ತಲ್‌ಸರ್, ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ಚೈತ್ರ ಬಿ. ಚೇತನ್, ತುಳುವೆರ ಜನಪದ ಕೂಟದ ಅಧ್ಯಕ್ಷ ಬಿ.ಬಿ. ಐತಪ್ಪ ರೈ, ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಇತರರು ಪಾಲ್ಗೊಳ್ಳಲಿದ್ದಾರೆ.