ಕುಶಾಲನಗರ, ಡಿ.೨೪: ಕೊಡಗು ಜಿಲ್ಲೆಗೆ ಆಗಮಿಸಿದ ಕೆಪಿಸಿಸಿ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕುಶಾಲನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡರು.
ಬೆAಗಳೂರಿನಿAದ ಶಿರಂಗಾಲ ಮೂಲಕ ಕುಶಾಲನಗರ ಮಾರ್ಗವಾಗಿ ಮಡಿಕೇರಿ ತೆರಳುತ್ತಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಎರಡು ಜೆಸಿಬಿ ಯಂತ್ರಗಳನ್ನು ಬಳಸಿ ಆ ಮೂಲಕ ಹೂವಿನ ಮಳೆಯನ್ನು ಸುರಿದ ದೃಶ್ಯ ಕಂಡುಬAತು.
ಗುರುವಾರ ರಾತ್ರಿ ೧೦ ಗಂಟೆಗೆ ಆಗಮಿಸಿದ ಡಿಕೆಶಿ ಅವರನ್ನು ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬಂಡೆ ವಾಲಗ ಜೊತೆಗೆ ಪಟಾಕಿ ಸಿಡಿಸುವ ಮೂಲಕ ಕಾಂಗ್ರೆಸ್ ಪಕ್ಷ ಶಿವಕುಮಾರ್ ಪರ ಘೋಷಣೆಗಳೊಂದಿಗೆ ಸ್ವಾಗತಿಸಿದರು. ಈ ಸಂದರ್ಭ ಜಿಲ್ಲಾಮಟ್ಟದ, ಕುಶಾಲನಗರ ಬ್ಲಾಕ್, ನಗರ, ಹೋಬಳಿ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.