ಸೋಮವಾರಪೇಟೆ, ಡಿ.೨೪: ಹೊಸ ವರ್ಷಾಚರಣೆಯ ನೆಪದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮೋಜು ಮಸ್ತಿ ಮಾಡಲು ಅವಕಾಶ ಕಲ್ಪಿಸಬಾರದು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕ್ಯಾಲೆಂಡರ್ ಬದಲಾವಣೆಯ ಡಿಸೆಂಬರ್ ೩೧ರ ರಾತ್ರಿ ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಧೂಮಪಾನ, ಅಬ್ಬರದ ಸಂಗೀತ ಸೇರಿದಂತೆ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ. ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆಯಲ್ಲಿ ಯುವ ಜನಾಂಗ ಈ ನೆಲದ ಸಂಸ್ಕೃತಿಯನ್ನು ಮರೆಯುತ್ತಿದೆ. ಆದ್ದರಿಂದ ಇಂತಹ ಆಚರಣೆಗಳಿಗೆ ಕಡಿವಾಣ ಹಾಕಬೇಕೆಂದು ಪದಾಧಿಕಾರಿಗಳು ಒತ್ತಾಯಿಸಿದರು.
ಹಿಂದೂ ಜನಜಾಗೃತಿ ಸಮಿತಿಯ ಬಿ.ಆರ್. ಈರಪ್ಪ, ಕಾಳಪ್ಪ, ಸುಬ್ರಮಣಿ, ಹರೀಶ್ ಅವರುಗಳು ಉಪಸ್ಥಿತರಿದ್ದು, ಶಿರಸ್ತೇದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.