ವೀರಾಜಪೇಟೆ, ಡಿ. ೨೩: ವೀರಾಜಪೇಟೆ ಕೊಡವ ಸಂಘ ಒಕ್ಕೂಟದ ಉದ್ಘಾಟನಾ ಸಮಾರಂಭ ತಾ. ೨೬ ರಂದು ವೀರಾಜಪೇಟೆ ಕೊಡವ ಸಮಾಜದ ಸ್ಪೋರ್ಟ್ಸ್ ಅಂಡ್ ರಿಕ್ರೀಯೇಷನ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದಿನ ಸಭಾಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಪದ್ಮಶ್ರೀ ಪ್ರಶಸ್ತಿ ವಿಜೇತ ಮೊಳ್ಳೆರ ಪಿ. ಗಣೇಶ್, ಅಖಿಲ ಕೊಡವ ಸಮಾಜ ಅಧ್ಯಕ್ಷ ಮಾತಂಡ ಸಿ. ಮೊಣ್ಣಪ್ಪ, ವೀರಾಜಪೇಟೆ ಕೊಡವ ಸಮಾಜ ಅಧ್ಯಕ್ಷ ವಾಂಚಿರ ನಾಣಯ್ಯ, ಹಿರಿಯ ಸಮಾಜ ಸೇವಕ ನಾಯಡ ವಾಸು ನಂಜಪ್ಪ ಅವರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಗೋಷ್ಠಿಯಲ್ಲಿ ಕಾರ್ಯದರ್ಶಿ ಬಾಚಿರ ಜಗದೀಶ್ ಉಪಸ್ಥಿತರಿದ್ದರು.