ಮಡಿಕೇರಿ ಡಿ. ೨೪ : ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ೨೦೧೯-೨೦ ಹಾಗೂ ೨೦೨೦-೨೧ನೇ ಸಾಲಿನ ವಾರ್ಷಿಕ ಮಹಾಸಭೆ ತಾ.೨೯ ರಂದು ಸಂಘದ ಅಧ್ಯಕ್ಷ ಎಸ್.ಎಂ.ಚAಗಪ್ಪ ಅಧ್ಯಕ್ಷತೆ ಯಲ್ಲಿ ನಡೆಯಲಿದೆ ಎಂದು ಸಂಘದ ಉಪಾಧ್ಯಕ್ಷ ವಿ. ಪಿ. ಸುರೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ ೧೧ ಗಂಟೆಗೆ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಸಭೆ ನಡೆಯಲಿದ್ದು, ೨೦೨೦ ಮತ್ತು ೨೧ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗು ವುದು. ರಾಜ್ಯ ಒಕ್ಕಲಿಗರ ಸಂಘದ ಕೊಡಗು ಕ್ಷೇತ್ರದಿಂದ ನಿರ್ದೇಶಕರಾಗಿ ಚುನಾಯಿತರಾದ ಹರಪಳ್ಳಿ ರವೀಂದ್ರ, ಗ್ರಾ.ಪಂ ಸದಸ್ಯರು, ಸಹಕಾರ ಸಂಘ, ಸಂಸ್ಥೆಗಳ ಪದಾಧಿಕಾರಿ ಗಳು, ಸದಸ್ಯರುಗಳನ್ನು ಸಭೆಯಲ್ಲಿ ಸನ್ಮಾನಿಸಲಾಗುವುದು. ಕೋವಿಡ್ ಮಾರ್ಗಸೂಚಿ ಯಂತೆ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.