ಮಡಿಕೇರಿ, ಡಿ.೨೪: ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದ ಮುಖಾಂತರ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ರಕ್ತ ನಿಧಿ ಕೇಂದ್ರಕ್ಕೆ ನೂತನ ವಾಹನ ಹಸ್ತಾಂತರಿಸಿ, ಶುಭ ಹಾರೈಸಿದರು.

ನಗರದ ಜಿಲ್ಲಾಸ್ಪತ್ರೆಯಲ್ಲಿ ರಕ್ತ ನಿಧಿ ವಾಹನವನ್ನು ತಾವೇ ವಾಹನ ಚಾಲನೆ ಮಾಡುವ ಮೂಲಕ ಉದ್ಘಾಟಿಸಿದರು. ನಂತರ ವಿಧಾನಪರಿಷತ್ ಸದಸ್ಯರು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವೈದ್ಯಾಧಿಕಾರಿಗಳು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ವರೆಗೆ ವಾಹನದಲ್ಲಿ ತೆರಳಿದರು.

ಬಳಿಕ ಮಾತನಾಡಿದ ಸುನಿಲ್ ಸುಬ್ರಮಣಿ ಅವರು ವಿಧಾನ ಪರಿಷತ್ ಅನುದಾನದಿಂದ ೧೭ ಲಕ್ಷ ರೂ. ವೆಚ್ಚದ ವಾಹನವನ್ನು ರಕ್ತನಿಧಿ ಕೇಂದ್ರಕ್ಕೆ ಒದಗಿಸಲಾಗಿದೆ. ವಾಹನವು ಜಿಲ್ಲೆಯಾದ್ಯಂತ ಸಂಚರಿಸಲಿದ್ದು, ಆರೋಗ್ಯಕ್ಕೆ ಸಂಬAಧಿಸಿದAತೆ ರಕ್ತನಿಧಿ ಕೇಂದ್ರದ ವಾಹನದ ಸೌಲಭ್ಯ ಪಡೆದುಕೊಳ್ಳುವಂತಾಗಬೇಕು ಎಂದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕಾರ್ಯಪ್ಪ ಕೆ.ಬಿ, ವೈದ್ಯಕೀಯ ಅಧೀಕ್ಷಕ ಡಾ. ಮಂಜುನಾಥ ಎಸ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಮಂಡಳಿ ಸದಸೆÀ್ಯ ಜಯಲಕ್ಷ್ಮಿ ಪಾಟ್ಕರ್, ನಗರದ ಹಿರಿಯ ವೈದ್ಯ ಪಾಟ್ಕರ್, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ.ನಂಜುAಡೆಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಆರ್.ವೆಂಕಟೇಶ್, ಜಿಲ್ಲಾ ಶಸ್ತçಚಿಕಿತ್ಸಕ ಡಾ.ವಿಶಾಲ್ ಕುಮಾರ್, ಸ್ಥಾನೀಯ ವೈದ್ಯಾಧಿಕಾರಿ ಡಾ.ರೂಪೇಶ್ ಗೋಪಾಲ್, ರಕ್ತ ನಿಧಿ ಕೇಂದ್ರ ವೈದ್ಯಾಧಿಕಾರಿ ಡಾ.ಕರುಂಬಯ್ಯ, ಮಕ್ಕಳ ತಜ್ಞ ಡಾ.ಪುರುಷೋತ್ತಮ, ಇತರರು ಇದ್ದರು.