ಮಡಿಕೇರಿ, ಡಿ. ೨೪: ಮಡಿಕೇರಿ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡರಾಮ ದೇವಾಲಯ ಸಮುದಾಯ ಭವನದ ಜೀರ್ಣೋದ್ಧಾರ ಮತ್ತು ಪುನರ್ ನಿರ್ಮಾಣಕ್ಕೆ ಕೊಡಗು - ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ರೂ. ೧೦ ಲಕ್ಷ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಮುಂದಿನ ಹಂತದ ಕಾಮಗಾರಿಗೂ ಹಣ ಬಿಡುಗಡೆ ಮಾಡುವುದಾಗಿ ಶ್ರೀರಾಮ ಸೇವಾ ಸಮಿತಿಯ ಪದಾಧಿಕಾರಿಗಳಿಗೆ ಆಶ್ವಾಸನೆಯಿತ್ತಿದ್ದಾರೆ. ಸಂಸದರ ಪ್ರಾದೇಶಿಕಾಭಿವೃದ್ಧಿ ಯೋಜನೆಯಡಿ ಈ ಅನುದಾನವನ್ನು ನೀಡಿರುವುದಾಗಿ ತಿಳಿಸಿದ್ದಾರೆ.