ನಾಪೋಕ್ಲು, ಡಿ. ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಿ.ಸಿ. ಟ್ರಸ್ಟ್ ವೀರಾಜಪೇಟೆ, ಮಡಿಕೇರಿ ವತಿ ಯಿಂದ ಭಾಗಮಂಡಲ ವಲಯದ ಕಕ್ಕಬ್ಬೆ ಸ್ಪೂರ್ತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವು ಸರೋಜಿನಿ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪದ್ಮಯ್ಯ ಸಿ.ಎಚ್. ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಜನೆಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯು ಸ್ವಾಭಿಮಾನದಿಂದ ಬದುಕು ಕಟ್ಟಿ ಕೊಳ್ಳುವಂತಾಗಬೇಕು. ಈ ದಿಸೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶಿಕ್ಷಣ, ಆರೋಗ್ಯ, ಹಾಗೂ ಗ್ರಾಮೀಣ ಬಡ ಜನರಿಗೆ ಸಂಘಗಳ ಮುಖೇನವಾಗಿ ಆರ್ಥಿಕ ಸಬಲೀಕರಣದ ಮೂಲಕ ನೈತಿಕ ಶಿಕ್ಷಣದ ವಿಚಾರಧಾರೆಗಳನ್ನು ನೀಡಿ ಸ್ವಾಸ್ಥö್ಯ ಸಮಾಜ ನಿರ್ಮಾಣಕ್ಕೆ ಪಣತೊಟ್ಟಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಇರುವ ಮಹಿಳೆಯರಿಗಾಗಿ ಜ್ಞಾನವಿಕಾಸ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಸಂತೋಷ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಕುಮಾರಿ ಶ್ರೇಯ, ಸೇವಾ ಪ್ರತಿನಿಧಿ ಶ್ರೀಮತಿ ಭಾಗ್ಯ ಹಾಗೂ ಒಕ್ಕೂಟದ ಅಧ್ಯಕ್ಷ, ಪದಾಧಿಕಾರಿಗಳು ಸ್ಪೂರ್ತಿ ಜ್ಞಾನವಿಕಾಸ ಕೇಂದ್ರದ ಸರ್ವ ಸದಸ್ಯರು ಉಪಸ್ಥಿತರಿದ್ದರು.