ಮಡಿಕೇರಿ, ಡಿ. ೨೪: ತಾ. ೨೫ ರಿಂದ (ಇಂದಿನಿAದ) ಜ. ೨ ರ ತನಕ ಮೂರ್ನಾಡಿನ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕೊಡವ ಕುಟುಂಬಗಳ ನಡುವಿನ ಹಾಕಿ ಹಾಗೂ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ.

ಚೌರೀರ ಕುಟುಂಬ ಕ್ರೀಡಾಕೂಟದ ಅತಿಥ್ಯ ವಹಿಸಿದ್ದು, ಹಾಕಿ ಪಂದ್ಯಾವಳಿಗೆ ೯೦ ಕುಟುಂಬಗಳು, ಫುಟ್ಬಾಲ್‌ಗೆ ೫೪ ಕುಟುಂಬಗಳು ಭಾಗವಹಿಸಲಿವೆ.

ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಚೌರೀರ ಕುಟುಂಬದ ಅಧ್ಯಕ್ಷ ಕೆ. ಪೂವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಡಿಕೇರಿ ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ, ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ, ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ನಿವೃತ್ತ ಶಿಕ್ಷಕಿ ಬಾಚೆಟ್ಟಿರ ಕಾಳಮ್ಮ ಮುದ್ದಯ್ಯ, ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಪಟ್ಟಡ ಪೂವಣ್ಣ, ಹಾಕಿ ಕೂರ್ಗ್ ಅಧ್ಯಕ್ಷ ಪೈಕೇರ ಕಾಳಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.