ಮಡಿಕೇರಿ, ಡಿ. ೨೫: ವೀರಾಜಪೇಟೆ ವಕೀಲರ ಸಂಘ ೬೦ನೇ ವಾರ್ಷಿಕೋತ್ಸವ ಅಂಗವಾಗಿ ನ್ಯಾಯಾಂಗ ವ್ಯವಸ್ಥೆಗೆ ಕೊಡಗು ನೀಡಿದ ಕೊಡುಗೆಯ ಬಗೆಗಿನ ಪುಸ್ತಕವನ್ನು ತಾ. ೨೭ ರಂದು ಲೋಕಾರ್ಪಣೆ ಗೊಳಿಸಲಾಗುವುದು ಎಂದು ಸಂಘದ ಅಧ್ಯಕ್ಷ ಐ.ಆರ್. ಪ್ರಮೋದ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಾ. ೨೭ ರಂದು ಬಿಟ್ಟಂಗಾಲದ ಅಂಬಟ್ಟಿ ರೆಸಾರ್ಟ್ನಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ ‘ಕ್ರೋನಿಕಲ್-೨೦೨೧- ಪುಸ್ತಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹೈಕೋರ್ಟ್ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ಅವರು ತಮ್ಮ ತಂದೆ ಎ.ಕೆ.ಸುಬ್ಬಯ್ಯ ಜ್ಞಾಪಕಾರ್ಥ ವಕೀಲರ ಸಂಘಕ್ಕೆ ನೀಡಿರುವ ಇ-ಗ್ರಂಥಾಯವನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಜಿ.ಶುಕುರೆ ಕಮಾಲ್ ಉದ್ಘಾಟಿಸಲಿದ್ದಾರೆ.

(ಮೊದಲ ಪುಟದಿಂದ) ಮುಖ್ಯ ಅತಿಥಿಗಳಾಗಿ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ವೀರಪ್ಪ, ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ವಿಶೇಷ ಆಹ್ವಾನಿತರಾಗಿ ಹೈಕೋರ್ಟ್ ರಿಜಿಸ್ಟಾçರ್ ಜನರಲ್ ಟಿ.ಜಿ. ಶಿವಶಂಕರೇಗೌಡ, ಕೊಡಗು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಲ್. ಜಿನರಾಳ್ಕರ್ ಭಾಗವಹಿಸಲಿದ್ದಾರೆ. ಇದುವರೆಗೂ ಸಂಘದ ಅಧ್ಯಕ್ಷರಾಗಿ ಮತ್ತು ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಬಿ.ಎನ್. ಸುಬ್ಬಯ್ಯ, ಜಂಟಿ ಕಾರ್ಯದರ್ಶಿ ವಿ.ಎಸ್. ಪ್ರೀತಂ, ನಿರ್ದೇಶಕ ನರೇಂದ್ರ ಕಾಮತ್ ಇದ್ದರು.