ಸೋಮವಾರಪೇಟೆ, ಡಿ. ೨೫: ಸ್ಥಳೀಯ ತಥಾಸ್ತು ಸಾತ್ವಿಕ ಸಂಸ್ಥೆಯ ಆಶ್ರಯದಲ್ಲಿ ತಾ. ೨೭ ರಂದು (ನಾಳೆ) ಇಲ್ಲಿನ ಮಹಿಳಾ ಸಮಾಜ ಸಭಾಂಗಣದಲ್ಲಿ ‘ಹೃದಯ ಸಾಕ್ಷಾತ್ಕಾರ’ ಹೆಸರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಜಿಲ್ಲಾ ರಕ್ತನಿಧಿ ಕೇಂದ್ರದ ಆಶ್ರಯದಲ್ಲಿ ತಾ. ೨೭ರಂದು ಬೆಳಿಗ್ಗೆ ೧೦ಗಂಟೆಗೆ ರಕ್ತದಾನ ಶಿಬಿರ ಆರಂಭಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ರವೀಂದ್ರ ತಿಳಿಸಿದ್ದಾರೆ.

ಶಿಬಿರದಲ್ಲಿ ಅಂಗಾAಗ ದಾನ, ನೇತ್ರ ಹಾಗೂ ದೇಹ ದಾನಕ್ಕೆ ಹೆಸರು ನೋಂದಾವಣೆ ಮಾಡಿಕೊಳ್ಳಲು ಅವಕಾಶ ಇದೆ. ದೇಹದಾನದ ಬಗ್ಗೆ ಮಡಿಕೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ತಜ್ಞರು ಮಾಹಿತಿ ನೀಡಲಿದ್ದಾರೆ. ದಾನಿಗಳು ತಮ್ಮ ಇತ್ತೀಚಿನ ಎರಡು ಭಾವಚಿತ್ರ, ಯಾವುದಾದರು ಒಂದು ಗುರುತಿನ ಚೀಟಿಯನ್ನು ತರಬೇಕು. ಹೆಚ್ಚಿನ ಮಾಹಿತಿಗೆ ಮೊ. ೯೯೪೫೯೯೪೭೪೪ನ್ನು ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ