ಮಡಿಕೇರಿ, ಡಿ. ೨೪: ಜಿಲ್ಲೆಯ ಮರಾಠ/ಮರಾಟಿ ಸಮಾಜ ಬಾಂಧವರಿಗಾಗಿ ಅಂಭಾಭವಾನಿ ಯುವಕ-ಯುವತಿ ಕ್ರೀಡಾ ಮನೋರಂಜನಾ ಸಂಘ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ನಡೆಯಲಿರುವ ೭ನೇ ವರ್ಷದ ಗ್ರಾಮೀಣ ಕ್ರೀಡಾಕೂಟಕ್ಕೆ ತಾ. ೨೫ರಂದು (ಇಂದಿನಿAದ) ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಮರಾಠ/ ಮರಾಟಿ
(ಮೊದಲ ಪುಟದಿಂದ) ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಎA. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮದೆ ಗ್ರಾ.ಪಂ. ಸದಸ್ಯ ಪಿ.ಕೆ. ಜೀವನ್, ಬಿ.ಎಸ್ ನವೀನಾ, ಜಿಲ್ಲಾ ಸಂಘದ ಉಪಾಧ್ಯಕ್ಷೆ ದೇವಕಿ ಜಿ.ಆರ್. ನಾಯ್ಕ, ಕಟ್ಟಡ ಸಮಿತಿ ಅಧ್ಯಕ್ಷ ಗುರುವಪ್ಪ, ಸದಸ್ಯ ಎಂ.ಕೆ. ಬಾಬು, ಕಾರ್ಯದರ್ಶಿ ಎಂ.ಎಸ್.ಯೋಗೇAದ್ರ, ಸ್ಥಾಪಕ ಅಧ್ಯಕ್ಷ ವಾಮನ್ ನಾಯ್ಕ, ಮಡಿಕೇರಿ ತಾಲೂಕು ಸಂಘಟನಾ ಕಾರ್ಯದರ್ಶಿ ಎಂ.ಟಿ.ದೇವಪ್ಪ, ಮಹಿಳಾ ವೇದಿಕೆ ಅಧ್ಯಕ್ಷೆ ರತ್ಮಮಂಜರಿ ಪಾಲ್ಗೊಳ್ಳಲಿದ್ದಾರೆ. ೨ ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಪುರುಷರಿಗೆ ೬ ಓವರಿನ ಕ್ರಿಕೆಟ್ ಪಂದ್ಯಾಟ, ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರಿಗೆ ಥ್ರೋಬಾಲ್, ಹಗ್ಗಜಗ್ಗಾಟ, ಸೇರಿದಂತೆ ನಿಂಬೆ ಚಮಚ ಓಟ, ಓಟದ ಸ್ಪರ್ಧೆ, ಕಾಳು ಹೆಕ್ಕುವ ಸ್ಪರ್ಧೆ, ಗೋಣಿಚೀಲ ಜಿಗಿತ, ಸಂಗೀತ ಕುರ್ಚಿ, ಭಾರದ ಗುಂಡು ಎಸೆತ ಇತ್ಯಾದಿ ಕ್ರೀಡಾಕೂಟ ನಡೆಯಲಿದೆ ಎಂದು ಯುವಕ ಸಂಘದ ಅಧ್ಯಕ್ಷ ಎಂ.ಆರ್.ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.