ಪೊನ್ನಂಪೇಟೆ, ಡಿ. ೨೫: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗದ ಇಬ್ಬರು ಶಿಕ್ಷಕರು ಹಾಗೂ ೯ ಮಂದಿ ವಿದ್ಯಾರ್ಥಿ ಗಳಿಗೆ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿಡಿಪಿಐ ವೇದಮೂರ್ತಿ ಅವರು ಶಾಲೆಗೆ ೬ ದಿನಗಳ ಕಾಲ ರಜೆ ಘೋಷಣೆ ಮಾಡಿದ್ದಾರೆ.

ಇಂದೂ ಕೂಡ ೭೫ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ವರದಿ ಬರಬೇಕಿದೆ. ರಜೆ ಮುಗಿಸಿ ವಿದ್ಯಾರ್ಥಿಗಳು ಶಾಲೆಗೆ ಮರಳಿದ ನಂತರ ಮತ್ತೊಮ್ಮೆ ಎಲ್ಲಾ ವಿದ್ಯಾರ್ಥಿಗಳಿಗೂ ಕೊರೊನಾ ಪರೀಕ್ಷೆ ಮಾಡಲಾಗುವುದು. ಈಗಾಗಲೇ ಸೋಂಕು ದೃಢಪಟ್ಟಿರುವ ವಿದ್ಯಾರ್ಥಿಗಳನ್ನು ಪಾಲಿಬೆಟ್ಟ ಕೋವಿಡ್‌ಕೇರ್ ಸೆಂಟರ್‌ಗೆ ಕಳುಹಿಸಿಕೊಡಲಾಗುವುದು ಎಂದು ವೀರಾಜಪೇಟೆ ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜ್ ಮಾಹಿತಿ ನೀಡಿದ್ದಾರೆ.