ನಾಪೋಕ್ಲು, ಡಿ. ೨೬: ಉಡುಪಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಮಾಸ್ರ‍್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನ ಓಟದ ಸ್ಪರ್ಧೆಯ ಮೂರು ವಿಭಾಗಗಳಲ್ಲಿ ಚಿನ್ನದ ಸಾಧನೆ ಮಾಡಿದ ನಾಪೋಕ್ಲು ಬಳಿಯ ಪಾಲೂರು ಗ್ರಾಮದ ಸೂದನ ಡಾಲಿ ಅವರು ರಾಷ್ಟಿçÃಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಉಡುಪಿ ಮತ್ತು ಕೊಡಗು ಜಿಲ್ಲೆಯ ಮಾಸ್ರ‍್ಸ್ ಅಥ್ಲೆಟಿಕ್ ಅಸೋಸಿಯೇಷನ್ ಮತ್ತು ಕರ್ನಾಟಕ ಮಾಸ್ರ‍್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ನಡೆದ
(ಮೊದಲ ಪುಟದಿಂದ) ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಸೂದನ ಡಾಲಿ ಅವರು ಉತ್ತಮ ಪ್ರದರ್ಶನ ತೋರುವ ಮೂಲಕ ೮೦೦ ಮೀ., ೧೫೦೦ ಮೀ. ಮತ್ತು ೫ ಕಿ.ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕಗಳನ್ನು ಪಡೆಯುವ ಮೂಲಕ ರಾಷ್ಟಿçÃಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮಾಸ್ರ‍್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾದ ವತಿಯಿಂದ ೪೨ನೇ ರಾಷ್ಟಿçÃಯ ಮಾಸ್ರ‍್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ತೆಲಂಗಾಣದ ಗಚ್ಚಿ ಗೌಲಿಯ ಜಿ.ಎಂ. ಬಾಲಯೋಗಿ ಕ್ರೀಡಾಂಗಣದಲ್ಲಿ ೨೦೨೨ರ ಫೆ.೨೧ ರಿಂದ ೨೫ರವರೆಗೆ ರಾಷ್ಟಿçÃಯ ಮಾಸ್ರ‍್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಡೆಯಲಿದೆ.