ಮಡಿಕೇರಿ, ಡಿ. ೨೬: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. ೨೭ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಕಾನೂನು ಸೇವಾ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಲಿದೆ.
ಸರ್ವೋಚ್ಚ ನ್ಯಾಯಾಲಂiÀದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಬಿ. ವೀರಪ್ಪ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಜಿನರಾಳ್ಕರ್ ಭೀಮರಾವ್ ಲಗಮಪ್ಪ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್. ಶಶಿಧರ ಶೆಟ್ಟಿ, ಕರ್ನಾಟಕ ಉಚ್ಚ ನ್ಯಾಯಾಲಯದ ಮಹಾ ವಿಲೇಖಾನಾಧಿಕಾರಿ ಟಿ.ಜಿ. ಶಿವಶಂಕರೇಗೌಡ, ವಕೀಲರ ಸಂಘದ ಅಧ್ಯಕ್ಷ ಕೆ.ಡಿ. ದಯಾನಂದ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಮಣ್ಯ ಇತರರು ಪಾಲ್ಗೊಳ್ಳಲಿದ್ದಾರೆ.