ಕೂಡಿಗೆ, ಡಿ.೨೫: ಕೂಡಿಗೆಯ ಶ್ರೀ ಸದ್ಗುರು ಅಪ್ಪಯ್ಯ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳ ವತಿಯಿಂದ ತಾ. ೨೬ರಂದು (ಇಂದು) ಗುರುವಂದನಾ ಮತ್ತು ಶೌಚಾಲಯ ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಶಿಕ್ಷಕರಿಗೆ ಗುರುವಂದನೆ ಮತ್ತು ಶೌಚಾಲಯದ ಕಟ್ಟಡದ ಉದ್ಘಾಟನೆ ನಡೆಯಲಿದೆ ಎಂದು ವಿದ್ಯಾರ್ಥಿಗಳ ಸಂಘಟನೆಯ ಮುಖ್ಯಸ್ಥರು ತಿಳಿಸಿದ್ದಾರೆ.