ಮಡಿಕೇರಿ, ಡಿ. ೨೬: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಸಂಬAಧಿಸಿದAತೆ ವಿವಿಧ ಅಭಿವೃದ್ಧಿ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಮಾಹಿತಿಯನ್ನು ಡಿಪಿಎಂಎಸ್ ತಂತ್ರಾAಶದಲ್ಲಿ ಅಪ್‌ಡೇಟ್ ಮಾಡುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಸಂಬAಧಪಟ್ಟ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್ಸಿಎಸ್ಪಿ ಕಾರ್ಯಕ್ರಮದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಉಪ ಯೋಜನೆಯಡಿ ದೊರೆಯುವ ಸೌಲಭ್ಯಗಳ ಕುರಿತು ಡಿಪಿಎಂಎಸ್ ತಂತ್ರಾAಶದಲ್ಲಿ ಸಂಬAಧಪಟ್ಟ ಇಲಾಖೆಗಳು ಕಡ್ಡಾಯವಾಗಿ ಮಾಹಿತಿಯನ್ನು ಅಪ್‌ಡೇಟ್ ಮಾಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಪರಿಶಿಷ್ಟ ಜಾತಿ ಉಪ ಯೋಜನೆಯ ಕಾರ್ಯಕ್ರಮ ದಡಿಯಲ್ಲಿ ಫಲಾನುಭವಿಗಳನ್ನು ಗುರುತಿಸಿ ವಿವಿಧ ಇಲಾಖೆಗಳಿಂದ ದೊರೆ ಯುವ ಸೌಲಭ್ಯ ಒದಗಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ವೈಯಕ್ತಿಕ ಫಲಾನುಭವಿಗಳು ಯೋಜನೆಯ ಉಪಯೋಗ ಪಡೆಯದೇ ಹೋದಲ್ಲಿ ಯೋಜನೆ ಯನ್ನು ಸಮುದಾಯಗಳು ಪಡೆಯು ವಂತಾಗಲು ಅಗತ್ಯ ಮಾಹಿತಿಯನ್ನು ನೀಡುವುದು ಮತ್ತು ಆರ್ಥಿಕ ಮತ್ತು ಭೌತಿಕ ಗುರಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ನಿರ್ದೇಶನ ನೀಡಿದರು.

ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ಎಸ್‌ಸಿಎಸ್‌ಪಿ ಕಾರ್ಯಕ್ರಮಗಳಿಗೆ ಸಂಬAಧಿಸಿದAತೆ ಸಂಬAಧಪಟ್ಟ ಇಲಾಖೆಗಳು ಜಿ.ಪಂ.ವ್ಯಾಪ್ತಿಯ ನಿಗದಿಪಡಿಸಿರುವ ಉಪ ಯೋಜನೆಗೆ ಸಂಬAಧಪಟ್ಟ ಮಾಹಿತಿ ನೀಡುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಉಪ ಯೋಜನಾ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ವಿವಿಧ ಇಲಾಖೆಗಳ ಭೌತಿಕ ಮತ್ತು ಆರ್ಥಿಕ ಗುರಿ ಸಾಧನೆ ಮತ್ತು ಮಾಸಿಕ ವರದಿಯ ಬಗ್ಗೆ ವಿವರಿಸಿದರು. ಡಿ.೩೦ ರಂದು ಕೆಸ್ವಾನ್ ಕಾರ್ಯಾಗಾರ ನಡೆಸಲಾಗುವುದು ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್ ಅವರು ಮಾಹಿತಿ ನೀಡಿದರು.

ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಂಜುAಡೇಗೌಡ, ಜಿ.ಪಂ. ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಸುರೇಶ್ ಭಟ್, ಸೆಸ್ಕ್ ಎಇಇ ದೇವಯ್ಯ, ಪೌರಾಯುಕ್ತ ಎಸ್.ವಿ. ರಾಮದಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ. ದರ್ಶನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಸಹಕಾರ ಇಲಾಖೆಯ ಸಹಾಯಕ ನಿಬಂಧಕರಾದ ರವಿಕುಮಾರ್ ಇತರರು ಇದ್ದರು.