ಮಡಿಕೇರಿ, ಡಿ. ೨೬: ಜಿಲ್ಲಾಡಳಿತ ಕೊಡಗು ಜಿಲ್ಲೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ರಾಷ್ಟçಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಸೆಂಟ್ ಜೋಸೆಫ್ ಕಾನ್ವೆಂಟ್‌ನಲ್ಲಿ ತಾ. ೨೯ ರಂದು ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ ೧೦.೩೦ ಕ್ಕೆ ನಡೆಯುವ ಸಭಾಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೇಶವಕಾಮತ್ ಹಾಗೂ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಅನಂತಶಯನ ಭಾಗವಹಿಸಲಿದ್ದಾರೆ.