ಮಡಿಕೇರಿ, ಡಿ. ೨೬: ನಗರದ ಶ್ರೀ ಅಯ್ಯಪ್ಪ ದೀಪಾರಾಧನಾ ಸಮಿತಿ ವತಿಯಿಂದ ಶೀ ಅಯ್ಯಪ್ಪ ಸ್ವಾಮಿಯ ಮಂಡಲ ಪೂಜೆಯನ್ನು ಶ್ರೀ ಮುತ್ತಪ್ಪ ದೇವಾಲಯದಲ್ಲಿರುವ ಅಯ್ಯಪ್ಪ ಗುಡಿಯಲ್ಲಿ ನಡೆಸಲಾಯಿತು.

ಬೆಳಿಗ್ಗೆ ಗಣಪತಿ ಹೋಮ, ಅಷ್ಟಾಭಿಷೇಕ ಮತ್ತು ಮಂಗಳಾರತಿ ಮಾಡಿ ಪ್ರಸಾದ ವಿತರಣೆ ಮಾಡಲಾಯಿತು.

ಸಂಜೆ ಸನ್ನಿಧಿಯಲ್ಲಿ ರಂಗಪೂಜೆ, ಭಜನೆ, ಪಡಿಪೂಜೆ ಮತ್ತು ಮಹಾಮಂಗಳಾರತಿ ಮಾಡಿ ಪ್ರಸಾದ ವಿತರಣೆ ಮಾಡಲಾಯಿತು. ಶ್ರೀ ಮುತ್ತಪ್ಪ ದೇವಸ್ಥಾನದ ಅಧ್ಯಕ್ಷ ಟಿ.ಕೆ. ಸುಧೀರ್ ಸಮ್ಮುಖದಲ್ಲಿ ಸಮಿತಿಯ ಪದಾಧಿಕಾರಿಗಳಾದ ಚಂದ್ರಶೇಖರ್, ಅನಿತಾ, ಹರೀಶ್ ಮತ್ತಿತರರ ಸ್ವಾಮಿಗಳು ಇದ್ದರು.