ಸುಂಟಿಕೊಪ್ಪ, ಡಿ.೨೬: ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಮಂಡಲಪೂಜೋತ್ಸವದ ಅಂಗವಾಗಿ ಭಾನುವಾರ ಬೆಳಿಗ್ಗಿನಿಂದಲೇ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ದೇವಾಲಯವನ್ನು ತಳಿರು ತೋರಣ, ವಿವಿಧ ಬಗೆಯ ಬಣ್ಣ ಬಣ್ಣದ ಹೂಗಳಿಂದ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಪೂರ್ವಾಹ್ನ ಗಣಪತಿಹೋಮ, ಕನ್ನಿಮೂಲ ಗಣಪತಿಗೆ ಎಳನೀರು ಅಭಿಷೇಕ, ಚಂಡೆಮೇಳ, ಶ್ರೀ ಅಯ್ಯಪ್ಪ ಸ್ವಾಮಿಗೆ ಪಂಚಾಮೃತ ಅಭಿಷೇಕ, ಅಯ್ಯಪ್ಪ ಸ್ವಾಮಿಗೆ ಲಕ್ಷಾರ್ಚನೆ, ಪಲ್ಲಪೂಜೆ ಸಲ್ಲಿಸಲಾಯಿತು. ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳು ವಿವಿಧ ಪೂಜಾ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡರು. ನಂತರ ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಯಿತು. ದೇವಸ್ಥಾನದ ಅರ್ಚಕರಾದ ಗಣೇಶ ಉಪಾಧ್ಯಾಯ ಅವರ ನೇತೃತ್ವದಲ್ಲಿ ದರ್ಶನ್ ಭಟ್, ಸಂತೋಷ್ ಹೆಬ್ಬಾರ್ ಹಾಗೂ ಇತರರು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಈ ಸಂದರ್ಭ ಅಧ್ಯಕ್ಷ ಸುರೇಶ್ ಗೋಪಿ, ಉಪಾಧ್ಯಕ್ಷರುಗಳಾದ ಎ.ಶ್ರೀಧರನ್, ಬಿ.ಕೆ.ಪ್ರಶಾಂತ್, ವಿನೋದ್, ಬಿ.ಎಲ್.ಆನಂದ, ಪ್ರಧಾನ ಕಾರ್ಯದರ್ಶಿ ಎಂ.ಚAದ್ರ, ಸಹಕಾರ್ಯದರ್ಶಿಎಂ.ಆರ್.ಶಶಿಕುಮಾರ್, ಪಿ.ಲೋಕೇಶ್, ಖಜಾಂಜಿ ಬಿ.ಎಂ.ಸುರೇಶ್ ಸೇರಿದಂತೆ ಮತ್ತಿತರರು ಇದ್ದರು.