ಸೋಮವಾರಪೇಟೆ, ಡಿ. ೨೭: ಪಟ್ಟಣದ ಶ್ರೀಮುತ್ತಪ್ಪಸ್ವಾಮಿ ಮತ್ತು ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು.

ಕ್ಷೇತ್ರದ ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿ ಅವರ ಅರ್ಚಕತ್ವದಲ್ಲಿ ಗಣಪತಿ ಹೋಮದೊಂದಿಗೆ ಪೂಜಾ ಕೈಂಕರ್ಯಗಳು ಆರಂಭವಾಯಿತು. ನಂತರ ಪಂಚಗವ್ಯಶುದ್ಧಿ ನಂತರ ವಿವಿಧ ಪೂಜಾ ವಿಧಿ-ವಿಧಾನಗಳು ನೆರವೇರಿದವು.

ಇದಕ್ಕೂ ಮೊದಲು ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಒಂದು ಲಕ್ಷ ತುಳಸಿದಳಗಳಿಂದ ವಿಶೇಷವಾದ ಅರ್ಚನೆ ಸಲ್ಲಿಸಲಾಯಿತು. ಪೂಜಾ ಕಾರ್ಯದಲ್ಲಿ ಸಿದ್ಧಲಿಂಗಪುರದ ಶ್ರೀ ಮಂಜುನಾಥದೇವಾಲಯದ ಪ್ರಧಾನ ಅರ್ಚಕ ಜಗದೀಶ್ ಉಡುಪ ಅವರು ಸಹಕರಿಸಿದರು. ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ. ವಿನೋದ್ ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ಎರಡು ದಿನಗಳ ಕಾಲ ಪೂಜಾ ಕಾರ್ಯವು ಯಶಸ್ವಿಯಾಗಿ ನೆರವೇರಿತು.