ಮಡಿಕೇರಿ, ಡಿ. ೨೭: ಮೇಕೇರಿ ಗ್ರಾಮದಲ್ಲಿ ನಡೆದಿದ್ದ ಒಂಟಿ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳನ್ನು ದೋಷಮುಕ್ತಗೊಳಿಸಿ ಮಡಿಕೇರಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

೨೦೧೯ ಮಾರ್ಚ್ ೩೦ರಂದು ರಾತ್ರಿ ಮೇಕೇರಿಯ ಅವಿವಾಹಿತ ಮಹಿಳೆ ಉಷಾ ಎಂಬವರನ್ನು ಸೋಮವಾರಪೇಟೆ ಬಳಿಯ ಅಬ್ಬೂರುಕಟ್ಟೆ ನಿವಾಸಿಗಳಾದ ಲಿಖಿತ ಹಾಗೂ ರವಿ ದಂಪತಿ ಕೊಲೆ ಮಾಡಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು.

ಮಡಿಕೇರಿ ಗ್ರಾಮಾಂತರ ಪೊಲೀಸರು ತನಿಖೆ ನಡೆಸಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಭಾರತೀಯ ದಂಡ ಸಂಹಿತೆ ಕಲಂ ೪೪೯, ೩೦೨, ೩೯೨, ರೆಡ್ ವಿತ್ ೩೪ರಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಯಾವುದೇ ಸೂಕ್ತ ಸಾಕ್ಷಾö್ಯಧಾರಗಳು ಸಾಬೀತಾಗದ ಹಿನ್ನೆಲೆಯಲ್ಲಿ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದರು. ಆರೋಪಿಗಳ ಪರ ವಕೀಲ ಬಿ.ಡಿ. ಕಪಿಲ್ ಕುಮಾರ್ ವಕಾಲತ್ತು ವಹಿಸಿದ್ದರು.