ಮಡಿಕೇರಿ, ಡಿ. ೨೬: ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ ನೃತ್ಯ, ನಾಟಕ ಸೇರಿದಂತೆ ಇತರ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ೨೦೨೧-೨೨ ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿ ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾಪ್ರಕಾರಗಳಲ್ಲಿ ನಿರಂತರ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ-ಸAಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ. ಅಸಂಘಟಿತ ತಂಡಗಳು/ ಏಕವ್ಯಕ್ತಿ ಕಲಾವಿದರಿಗೆ ವಾದ್ಯ ಪರಿಕರ, ವೇಷಭೂಷಣ ಖರೀದಿಗೆ ಧನಸಹಾಯ. ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನಸಹಾಯ ಈ ಮೂರು ಯೋಜನೆಗಳಿಗೆ ಧನಸಹಾಯ ನೀಡಲು ಸೇವಾ ಸಿಂಧು Sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ತಾ. ೨೫ ರಿಂದ ಜನವರಿ ೮ ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರದ ಮಾರ್ಗಸೂಚಿಯನ್ನು ಸೇವಾ ಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‌ಸೈಟ್ ತಿತಿತಿ.ಞಚಿಟಿಟಿಚಿಜಚಿsiಡಿi. ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ೯೩೮೦೨೦೬೭೦೪/ ೮೦೮೮೩೦೪೮೫೫ ಅನ್ನು ಹಾಗೂ ಆಯಾಯ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ ತಿಳಿಸಿದ್ದಾರೆ.

ನಿಗದಿತ ದಿನಾಂಕದ ನಂತರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ.