ಕಣಿವೆ, ಡಿ. ೨೭ : ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಕುಶಾಲನಗರದ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ನೃತ್ಯ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಮAಜುಶ್ರೀ ಮ್ಯಾಜಿಕ್ ಸ್ಟೆಪ್ಸ್ ನೃತ್ಯ ಸಂಸ್ಥೆ ವತಿಯಿಂದ ಮೈಸೂರಿನ ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯ ಜೂನಿಯರ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿತು.

ಸ್ಪರ್ಧೆಯಲ್ಲಿ ರಾಜ್ಯದ ವಿವಿಧೆಡೆಯಿಂದ ಸುಮಾರು ೪೦೦ಕ್ಕೂ ಅಧಿಕ ತಂಡಗಳು ಭಾಗವಹಿಸಿದ್ದವು. ಈ ಪೈಕಿ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿಯ ನೃತ್ಯ ತಂಡದ ಶಿವತಾಂಡವA ಕಲಾ ಪ್ರಾಕಾರಕ್ಕೆ ದ್ವಿತೀಯ ಬಹುಮಾನ ಲಭಿಸಿದೆ. "ಎ ಕ್ರಿಯೇಟಿವ್ ಅಕಾಡೆಮಿ"ಯ ನೃತ್ಯ ಸಂಯೋಜಕ ಅಕ್ತರ್ ಮಾರ್ಗದರ್ಶನದಲ್ಲಿ ಮಕ್ಕಳು ನೃತ್ಯ ಪ್ರದರ್ಶನ ನೀಡಿದರು. ಜೊತೆಗೆ ಕೈಬರಹ ಸ್ಪರ್ಧೆಯಲ್ಲಿ ತಂಡದ ಸಿಂಚನ ಪ್ರಥಮ ಸ್ಥಾನ ಪಡೆದಿದ್ದಾರೆ. ಚಿತ್ರಕಲೆ ಸ್ಪರ್ಧೆಯಲ್ಲಿ ಪೂರ್ಣಿಮಾ ತೃತೀಯ ಸ್ಥಾನ ಪಡೆದಿದ್ದಾರೆ.

ಅಲ್ಲದೇ ಭಾರತ್ ಟಿವಿ ಹುಣಸೂರು ಇವರ ಆಶ್ರಯದಲ್ಲಿ ನಡೆದ ಪ್ರಥಮ ವರ್ಷದ ಡ್ಯಾನ್ಸ್ ವಿನ್ ಡ್ಯಾನ್ಸ್ ನೃತ್ಯ ಸ್ಪರ್ಧೆಯಲ್ಲಿ ಉತ್ತಮ ನೃತ್ಯ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.