ಗೋಣಿಕೊಪ್ಪಲು, ಡಿ. ೨೬: ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಡಗು ಜಿಲ್ಲಾ ಘಟಕದ ಸಮಿತಿಯ ಪುನರಚನೆ ಕಾರ್ಯಕ್ರಮವು ತಾ. ೨೯ ರಂದು ಅರುವತ್ತೋಕ್ಲುವಿನ ಭರಣಿ ಸಭಾಂಗಣದಲ್ಲಿ ನಡೆಸಲಾಗುವುದೆಂದು ರೈತ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಚೆಪ್ಪುಡಿರ ಕಾರ್ಯಪ್ಪ ತಿಳಿಸಿದ್ದಾರೆ.
ಗೋಣಿಕೊಪ್ಪಲುವಿನ ಖಾಸಗಿ ಹೊಟೇಲ್ನ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಇವರು, ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ವರಿಷ್ಠರಾದ ಚುಕ್ಕಿ ನಂಜುAಡಸ್ವಾಮಿ, ಕೆ.ಟಿ. ಗಂಗಾಧರ್, ಪಚ್ಚೆ ನಂಜುAಡ ಸ್ವಾಮಿ, ವಿದ್ಯಾಸಾಗರ್, ಮಂಜುಕಿರಣ್ ಸೇರಿದಂತೆ ಅನೇಕ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜಿಲ್ಲೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಪದ್ಮಶ್ರೀ ಎಂ.ಪಿ. ಗಣೇಶ್, ನೂತನ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಹಾಗೂ ಹಲವು ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಕಳ್ಳಿಚಂಡ ಧನು, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಚಂಗುಲAಡ ರಾಜಪ್ಪ ಜಿಲ್ಲಾ ಸಹಕಾರ್ಯದರ್ಶಿ ಚೆಪ್ಪುಡಿರ ಮಹೇಶ್ ಉಪಸ್ಥಿತರಿದ್ದರು.