ಮಡಿಕೇರಿ, ಡಿ. ೨೭: ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿ ತಾಲೂಕು ಸಮಿತಿ ರಚಿಸುವ ಕುರಿತು ಮತ್ತು ಮುಂದಿನ ಕಾರ್ಯಕ್ರಮಗಳ ರೂಪುರೇಷೆ ಕುರಿತು ಸಮಾಲೋಚಿಸಲು ತಾ. ೨೯ ರಂದು ಮಧ್ಯಾಹ್ನ ೩ ಗಂಟೆಗೆ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಕಸಾಪದ ಮಡಿಕೇರಿ ತಾಲೂಕು ಸದಸ್ಯರ ಸಭೆ ಏರ್ಪಡಿಸಲಾಗಿದೆ. ಸಭೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮತ್ತು ತಾಲೂಕು ನಿಕಟಪೂರ್ವ ಅಧ್ಯಕ್ಷ ಕುಡೆಕಲ್ ಸಂತೋಷ್ ಉಪಸ್ಥಿತರಿರುವರು.
ಕುವೆಂಪು ಜನ್ಮದಿನಾಚರಣೆ
ಇದೇ ಸಂದರ್ಭ ಕುವೆಂಪು ಜನ್ಮದಿನಾಚರಣೆ ಪ್ರಯುಕ್ತ ವೀರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕಿ ಡಿ.ಎಸ್.ಪ್ರತಿಮಾ ರೈ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಭಾಗವಹಿಸಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆ ತಿಳಿಸಿದೆ.