ಮಡಿಕೇರಿ, ಡಿ. ೨೮: ೨೦೧೯-೨೦ನೇ ಸಾಲಿನ ವಿಶೇಷ ಕೇಂದ್ರೀಯ ನೆರವಿನಡಿ ಕೋಳಿ ಸಾಕಾಣಿಕೆಗೆ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲು ಪರಿಶಿಷ್ಟ ಪಂಗಡದ ಜನಾಂಗದವರಿAದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಹೊಸ ಜಿಲ್ಲಾ ಪಂಚಾಯಿತಿ ಕಟ್ಟಡ, ೧ನೇ ಮಹಡಿ, ಕೊಡಗು ಜಿಲ್ಲೆ, ಮಡಿಕೇರಿ ೦೮೨೭೨-೨೦೦೫೦೦, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವೀರಾಜಪೇಟೆ ೦೮೨೭೪-೨೬೧೨೬೧ ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ೦೮೨೭೬-೨೮೧೧೧೫ ಮತ್ತು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ೦೮೨೭೨-೨೨೩೫೫೨ ಇಲ್ಲಿ ಪಡೆದು ಜನವರಿ ೫ ರೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವಾಗ ಜಾತಿ ದೃಢೀಕರಣ ಪತ್ರ, ಆದಾಯ ದೃಢೀಕರಣ ಪತ್ರ (ರೂ. ೧.೫೦ ಲಕ್ಷದ ಒಳಗಿರಬೇಕು), ಆಧಾರ್ ಕಾರ್ಡ್, ಬಿ.ಪಿ.ಎಲ್. ಪಡಿತರ ಚೀಟಿ, ಕೋಳಿ ಸಾಕಾಣಿಕೆ ಶೆಡ್ ನಿರ್ಮಾಣಕ್ಕೆ ಅಗತ್ಯವಾದ ನಿವೇಶನ ಹಾಗೂ ನೀರಿನ ಸೌಲಭ್ಯ ಹೊಂದಿರುವ ಬಗ್ಗೆ ದಾಖಲೆ, ಸ್ಥಳೀಯ ಗ್ರಾಮ ಪಂಚಾಯಿತಿಯಿAದ ನಿರಾಕ್ಷೇಪಣಾ ಪತ್ರ, ವಿದ್ಯುತ್ ಸಂಪರ್ಕ ಹೊಂದಿರಬೇಕು. ಆರೋಗ್ಯ ಮತ್ತು ಪಶು ಸಂಗೋಪನಾ ಇಲಾಖೆಯ ಅನುಮತಿ ಪತ್ರ, ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರು ಸರ್ಕಾರಿ ನೌಕರಿಯಲ್ಲಿ ಇಲ್ಲವೆಂದು ದೃಢೀಕರಣ, ಅರ್ಜಿದಾರರಾಗಲೀ ಕುಟುಂಬದ ಸದಸ್ಯರಾಗಲೀ ನಿಗಮ, ಇಲಾಖೆಯ ಯಾವುದೇ ಸೌಲಭ್ಯವನ್ನು ಪಡೆದಿಲ್ಲದಿರುವ ಬಗ್ಗೆ ದೃಢೀಕರಣ. ಘಟಕ ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ, ಫಲಾನುಭವಿ ವಂತಿಗೆಯನ್ನು ಭರಿಸುವ ಬಗ್ಗೆ ಒಪ್ಪಿಗೆ ಪತ್ರ, ಫಲಾನುಭವಿಗಳು ವಂತಿಗೆಯನ್ನು ಬ್ಯಾಂಕ್ ಮೂಲಕ ಸಾಲ ಮಂಜೂರು ಮಾಡಿಕೊಂಡಲ್ಲಿ ಬ್ಯಾಂಕ್ನಿAದ ಸಾಲ ನೀಡುವ ಬಗ್ಗೆ ಬ್ಯಾಂಕ್ನಿAದ ಪಡೆದ ಒಪ್ಪಿಗೆ ಪತ್ರ ಸಲ್ಲಿಸಬೇಕು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.