ಶನಿವಾರಸಂತೆ, ಡಿ. ೨೮: ಕೊಡ್ಲಿಪೇಟೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಮಸಿ ಬಳಿದು ಅವಮಾನಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಕಂದಾಯ ಅಧಿಕಾರಿ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಮಸಿ ಬಳಿದು ಅವಮಾನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ತಾ. ೨೦ ರಂದು ನಡೆದಿದೆ. ಧಾರ್ಮಿಕ ಗುರು, ಸ್ವಾತಂತ್ರö್ಯ ಹೋರಾಟಗಾರರು, ದಾರ್ಶನಿಕರು, ಇತರೆ ಮಹಾನ್ ವ್ಯಕ್ತಿಗಳ ಪ್ರತಿಮೆಗಳಿಗೆ ಅವಮಾನಿಸುವುದು ಇಡೀ ಮಾನವ ಸಮಾಜವನ್ನು ಅವಮಾನಿಸಿ ದಂತಾಗುತ್ತದೆ. ಆದ್ದರಿಂದ ಇಂತಹ ಹೀನ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಮುಂದೆ ಜರುಗದಂತೆ ಕ್ರಮವಹಿಸಿ ಸಮಾಜದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಕಾರ್ಯದರ್ಶಿ ರಾಜೇಶ್ವರಿ ನಾಗರಾಜ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಜಿಲ್ಲಾ ಘಟಕದ ಗೌರವಾಧ್ಯಕ್ಷ ಕಿರಿಕೊಡ್ಲಿಮಠದ ಸದಾಶಿವಸ್ವಾಮೀಜಿ, ತಾಲೂಕು ಘಟಕದ ಗೌರವಾಧ್ಯಕ್ಷ ಕಲ್ಲುಮಠದ ಮಹಾಂತಸ್ವಾಮೀಜಿ, ಜಿಲ್ಲಾ ಉಪಾಧ್ಯಕ್ಷ ಜಿ.ಎಂ. ಕಾಂತರಾಜ್, ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಸತೀಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಎಂ. ಪುಟ್ಟಸ್ವಾಮಿ, ಪದಾಧಿಕಾರಿಗಳಾದ ಡಿ.ಬಿ. ಸೋಮಪ್ಪ, ಎಸ್.ಬಿ. ನಂಜಪ್ಪ, ಎಸ್.ಆರ್. ಶಿವಪ್ಪ, ಜ್ಞಾನೇಶ್ವರಿ, ಕೋಮಲಾ, ಮಂಜುಳಾ, ದಿವಾಕರ್, ಸತೀಶ್, ನಂದೀಶ್, ಮೋಕ್ಷಿತ್, ಆಶಾ ಪುಟ್ಟಸ್ವಾಮಿ ಪಾಲ್ಗೊಂಡಿದ್ದರು.