ಮಡಿಕೇರಿ, ಡಿ.೨೮: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐಬಿಪಿಎಸ್ ರಾಷ್ಟಿçÃಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.

ಆಸಕ್ತರು ಜನವರಿ ೫ ರೊಳಗೆ ಬೆಳಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.ಸಂ.೦೮೨೧-೨೫೧೫೯೪೪ ನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಆರ್. ರಾಜಣ್ಣ ಅವರು ತಿಳಿಸಿದ್ದಾರೆ.