ಸೋಮವಾರಪೇಟೆ,ಡಿ.೨೮: ನೆರೆಯ ಕೇರಳ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣಗಳು ಮರುಕಳಿಸುತ್ತಿದ್ದು, ಇದಕ್ಕೆ ಶಾಶ್ವತ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಆಗ್ರಹಿಸಿ ಬಿಜೆಪಿ ತಾಲೂಕು ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪಟ್ಟಣದ ಮಹಿಳಾ ಸಮಾಜದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಕೇರಳ ಸರ್ಕಾರ ಹಾಗೂ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ವಿರುದ್ಧ ಘೋಷಣೆ ಮೊಳಗಿಸಿದರು.

ಕೇರಳ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಅಲ್ಲಿನ ಸರ್ಕಾರವು ಒಂದು ವರ್ಗದ ಓಲೈಕೆಯಲ್ಲಿ ತೊಡಗಿರುವುದರಿಂದ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಯ ಕಾರ್ಯಕರ್ತರು ತಮ್ಮ ದುಷ್ಕೃತ್ಯ ಮೆರೆಯುತ್ತಿದ್ದಾರೆ. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರ ಸರಣಿ ಹತ್ಯೆಯಾಗುತ್ತಿದ್ದರೂ ಕೇರಳ ಸರ್ಕಾರ ಮೌನಕ್ಕೆ ಶರಣಾಗಿದೆ ಎಂದು ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಗಂಗಾಧರ್ ಮಾಲಂಬಿ ಆರೋಪಿಸಿದರು.

ಕಳೆದ ತಾ. ೧೯ರಂದು ಕೇರಳದ ಅಲ್ಲಪುರಂನಲ್ಲಿ ಕೇರಳ ರಾಜ್ಯ ಬಿಜೆಪಿ ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲರೂ ಆಗಿದ್ದ ರಂಜಿತ್ ಶ್ರೀನಿವಾಸ್ ಅವರನ್ನು ಕೊಲೆಗೈದಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಒದಗಿಸಲು ಅಲ್ಲಿನ ಸರ್ಕಾರಕ್ಕೆ ರಾಷ್ಟçಪತಿಗಳು ನಿರ್ದೇಶನ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂಬAಧಿತ ಮನವಿಯನ್ನು ತಹಶೀಲ್ದಾರ್ ಗೋವಿಂದರಾಜು ಮೂಲಕ ರಾಷ್ಟçಪತಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಪದಾಧಿಕಾರಿಗಳಾದ ಮೋಹನ್‌ದಾಸ್, ಪಿ.ಆರ್. ಸುನಿಲ್‌ಕುಮಾರ್, ಸೋಮೇಶ್, ರಮೇಶ್, ರುಕ್ಮಿಣಿ, ಶ್ರೀನಿಧಿ ಲಿಂಗಪ್ಪ, ಸುಬ್ರಮಣಿ, ವಿನೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.