ಮಡಿಕೇರಿ, ಡಿ. ೨೮: ಏಕಾಏಕಿ ಸ್ಥಗಿತಗೊಂಡಿರುವ ಗಣಪತಿ ಬೀದಿ ರಸ್ತೆ ಅಗಲೀಕರಣ ಹಾಗೂ ನೂತನ ರಸ್ತೆ ಕಾಮಗಾರಿ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿರುವ ಕಾಮಗಾರಿಯನ್ನು ತ್ವರಿತ ಹಾಗೂ ವೈಜ್ಞಾನಿಕವಾಗಿ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಸ್ಥಳದಲ್ಲಿದ್ದ ಗುತ್ತಿಗೆದಾರರೊಂದಿಗೆ ಮಾತನಾಡಿದ ವೀಣಾ ಅಚ್ಚಯ್ಯ, ಕಾಮಗಾರಿ ತಡವಾಗಲು ಕಾರಣವೇನೆಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಗುತ್ತಿಗೆದಾರ, ನಾವು ೨೦ ದಿನದೊಳಗೆ ಕೆಲಸ ಮುಗಿಸುತ್ತೇವೆ. ಆದರೆ, ವಿದ್ಯುತ್ ಇಲಾಖೆ ಕಾಮಗಾರಿ ಸ್ಥಗಿತಕ್ಕೆ ಸೂಚಿಸಿತ್ತು. ಜೊತೆಗೆ ನೀರಿನ ಪೈಪ್‌ಲೈನ್ ಕೆಲಸ ಮುಗಿಯಬೇಕಾಗಿದೆ. ಇದೆಲ್ಲ ಪೂರ್ಣಗೊಂಡ ನಂತರವೇ ಕೆಲಸ ಮಾಡಲು ಸಾಧ್ಯ ಎಂದು ಮಾಹಿತಿ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೀಣಾ ಅಚ್ಚಯ್ಯ, ಹಂತಹAತವಾಗಿ ಕಾಮಗಾರಿ ಮಾಡಬೇಕಾಗಿತ್ತು. ಕಾಮಗಾರಿ ವಿಳಂಬವಾಗಿರುವುದರಿAದ ನೀರಿನ ಸಮಸ್ಯೆ ಉಂಟಾಗಿದೆ. ಬಡಾವಣೆಯ ನಿವಾಸಿಗಳು ಇದರಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ. ಕಾವೇರಮ್ಮ ಸೋಮಣ್ಣ ನಗರಸಭೆ ಅಧ್ಯಕ್ಷೆಯಾಗಿದ್ದ ಸಂದರ್ಭದಲ್ಲಿ ಈ ಯೋಜನೆಗೆ ಕ್ರಿಯಾ ಯೋಜನೆ ರೂಪಿಸಲಾಗಿತ್ತು. ಅಗಲೀಕರಣ ಸಂಬAಧ ನಿವಾಸಿಗಳು ಸ್ವಯಂಪ್ರೇರಿತವಾಗಿ ಕಟ್ಟಡ ಕೆಡವಿ ನಗರಸಭೆಗೆ ಸಹಕಾರ ನೀಡಿದ್ದಾರೆ. ತಾಂತ್ರಿಕ ಕಾರಣವೊಡ್ಡಿ ಕಾಮಗಾರಿ ಸ್ಥಗಿತಗೊಳಿಸಿರುವುದು ಸರಿಯಲ್ಲ. ನಗರಸಭೆ ಅಧ್ಯಕ್ಷರು ಇದಕ್ಕೆ ನೇರ ಹೊಣೆಯಾಗಿದ್ದಾರೆ. ಈ ಬಗ್ಗೆ ನಗರಸಭೆ ಪೌರಾಯುಕ್ತರೊಂದಿಗೆ ಮಾತನಾಡಿದ್ದೇನೆ. ಒಂದು ವಾರದೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ನಗರ ಕಾಂಗ್ರೆಸ್‌ನಿAದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯರಾಗಿರುವ ಬಿ.ವೈ. ರಾಜೇಶ್ ಯಲ್ಲಪ್ಪ ಮಾತನಾಡಿ, ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಪರಿಣಾಮ ಸ್ಥಳೀಯರಿಗೆ ಸಮಸ್ಯೆಯಾಗಿದೆ. ವೈಜ್ಞಾನಿಕವಾಗಿ ಕೆಲಸವಾಗುತ್ತಿಲ್ಲ. ವಿದ್ಯುತ್ ಕಂಬ ಕಾಮಗಾರಿಗೂ ಮುನ್ನ ಸ್ಥಳಾಂತರ ಮಾಡಬೇಕಾಗಿತ್ತು. ಆದರೆ, ಇದೀಗ ಕಂಬಗಳ ಸ್ಥಳಾಂತರ ಮಾಡಲಾಗುತ್ತಿದೆ. ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕೆAದು ಒತ್ತಾಯಿಸಿದರು.
ಈ ಸಂದರ್ಭ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರ ಮೈನಾ, ಪ್ರಮುಖರಾದ ಯಾಕೂಬ್, ಮಿನಾಜ್ ಪ್ರವೀಣ್, ಪ್ರಭು ರೈ, ಅಂಬೇಕಲ್ ನವೀನ್ ಕುಶಾಲಪ್ಪ, ಪ್ರಕಾಶ್ ಆಚಾರ್ಯ, ಫ್ಯಾನ್ಸಿ ಪಾರ್ವತಿ, ವಿಧಾನ ಪರಿಷತ್ ಸದಸ್ಯರ ಆಪ್ತ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.