ಕೂಡಿಗೆ, ಡಿ. ೨೭ : ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಸೇವೆಯಿಂದ ನಿವೃತ್ತಗೊಂಡ ಶಿಕ್ಷಕ ಡಿ.ವಿ.ಗಣೇಶ್ ಅವರನ್ನು ಶಾಲೆಯ ಹಾಗೂ ಎಸ್.ಡಿ. ಎಂ.ಸಿ. ವತಿಯಿಂದ ಬೀಳ್ಕೊಡ ಲಾಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಪಾಂಡು, ಮಕ್ಕಳ ಭವಿಷ್ಯ ರೂಪಿಸಿದ ಅವರ ವಿಶ್ರಾಂತ ಜೀವನ ಸುಖಮಯವಾಗಿರಲಿ" ಎಂದರು.

ಸರ್ಕಾರಿ ಶಾಲೆಗಳ ಪ್ರಗತಿಗೆ ಪೋಷಕರು ಶಿಕ್ಷಕರೊಂದಿಗೆ ಶ್ರಮಿಸಬೇಕು ಎಂದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್. ಮಂಜುನಾಥ್ ಮಾತನಾಡಿ, ಶಿಕ್ಷಕರು ಶಾಲೆಗೆ ಅವಿಸ್ಮರಣೀಯ ಸೇವೆ ಸಲ್ಲಿಸಿ ದ್ದಾರೆ ಎಂದರು.

ಸನ್ಮಾನಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಡಿ.ವಿ.ಗಣೇಶ್, ನಿವೃತ್ತಿ ನಂತರವೂ ತಾವು ಈ ಶಾಲೆಯ ಪ್ರಗತಿಗೆ ಶ್ರಮಿಸುವುದಾಗಿ ತಿಳಿಸಿದರು.

ಕೂಡಿಗೆ ಡಯಟ್ ಸಂಸ್ಥೆಯ ಪ್ರಾಂಶುಪಾಲ ಕೆ.ವಿ. ಸುರೇಶ್ ಮಾತನಾಡಿ, ಶಿಕ್ಷಕರ ನಿವೃತ್ತ ಸುಖಮಯವಾಗಿರಲಿ ಎಂದು ಹಾರೈಸಿದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.. ಬಸವರಾಜ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಪಿ. ಕರುಂಬಯ್ಯ, ಎಸ್.ಡಿ.ಎಂ.ಸಿ.ಸದಸ್ಯ ಗಿರಿಪ್ರಕಾಶ್, ಮುಖ್ಯೋಪಾಧ್ಯಾಯಿನಿ ಎ.ಭೋಜಮ್ಮ, ಶಿಕ್ಷಕರ ಸಂಘಟನೆಯ ಪ್ರಮುಖರು, ಎಸ್.ಡಿ.ಎಂ.ಸಿ.ಸದಸ್ಯರು, ಶಿಕ್ಷಕರು ಇದ್ದರು.