ಕೂಡಿಗೆ, ಡಿ. ೨೭: ಗಾ.ಪಂ.ವ್ಯಾಪ್ತಿಯ ಹುದುಗೂರು ಗ್ರಾಮದ ಯುವಕ ಸಂಘದ ವತಿಯಿಂದ ಈ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಸಂಘದ ಅಧ್ಯಕ್ಷ ಐ.ಎಸ್. ಶರತ್ ವಹಿಸಿದ್ದರು. ಈ ವ್ಯಾಪ್ತಿಯ ಹುದುಗೂರು ಕಾಳಿದೇವನ ಹೊಸೂರು, ಮಾವಿನಹಳ್ಳ ವ್ಯಾಪ್ತಿಯ ೭೫ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಉಮಾಮಹೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ಕಾರ್ಯದರ್ಶಿ ಸುರೇಶ್, ಗ್ರಾಮದ ಪ್ರಮುಖರಾದ ಬೋಪಯ್ಯ, ಐ.ಎಸ್. ಗಣೇಶ್, ಟಿ.ಪಿ. ಪೂವಯ್ಯ ಸೇರಿದಂತೆ ಯುವಕ ಸಂಘದ ಸದಸ್ಯರು, ಗ್ರಾ.ಪಂ. ಸದಸ್ಯರು ಹಾಗೂ ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು.