ನಾಪೋಕ್ಲು, ಡಿ. ೨೮: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟಿçÃಯ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಭಾರತದ ಐದನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಸ್ಮರಣಾರ್ಥ ಅವರ ಜನ್ಮದಿನವನ್ನು ಕಿಸಾನ್ ದಿವಸ್ ಎಂದು ಆಚರಿಸಲಾಗುತ್ತದೆ.

ಈ ದಿನದ ಮಹತ್ವವನ್ನು ಕಾಲೇಜಿನ ವಾಣಿಜ್ಯ ಉಪನ್ಯಾಸಕ ಕೇಲೇಟಿರ ಸೋಮಯ್ಯ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ರೈತರ ಇಂದಿನ ಸ್ಥಿತಿಗತಿಗಳು ಹಾಗೂ ರಾಷ್ಟçಮಟ್ಟದಲ್ಲಿ ಅವರ ಉದ್ಧಾರಕ್ಕಾಗಿ ಕೈಗೊಂಡ ಯೋಜನೆಗಳ ಪಟ್ಟಿಯನ್ನು ತಿಳಿಸಿದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ, ಬೋಧಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.