ಕುಶಾಲನಗರ, ಡಿ.೨೮ ಬೆಳಗಾಂ ನಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟ ಖಂಡಿಸಿ ಕುಶಾಲನಗರ ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಇಎಸ್ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿದರು. ಸರ್ಕಾರ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಂಡು ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ವೇದಿಕೆ ಅಧ್ಯಕ್ಷ ವೆಂಕಟೇಶ್ ಪೂಜಾರಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಡಿಸೆಂಬರ್ ೩೦ರಂದು ರಾಜ್ ಭವನ್ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ. ೩೧ರಂದು ಕರೆ ನೀಡಿರುವ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇರುವುದಿಲ್ಲ, ಬಂದ್ ಮೂಲಕ ಜನತೆಗೆ ತೊಂದರೆ ಹೊರತು ಯಾವುದೇ ಸಾಧನೆ ಸಾಧ್ಯವಿಲ್ಲ ಎಂದು ಅವರು ಹೇಳಿದರು. ಪ್ರತಿಭಟನೆ ಸಂದರ್ಭ ಸಂಘಟನೆ ಪ್ರಮುಖರಾದ ನಾಗೇಗೌಡ, ಗೀತಾ ಕೃಷ್ಣಪ್ಪ, ದೀಪಕ್, ಮಂಜು ಮತ್ತಿತರರು ಇದ್ದರು.