ಮಡಿಕೇರಿ, ಡಿ. ೨೯: ಪ್ರಸಕ್ತ (೨೦೨೧-೨೨) ಸಾಲಿನಲ್ಲಿ ಕೊಡಗು ಜಿಲ್ಲಾ ಪಂಚಾಯತ್ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಶಾಲಾ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ೨೦೨೧ರ ಜನವರಿ ೧ರ ನಂತರ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು. ಅಥವಾ ರಾಷ್ಟಿçÃಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಕ್ರೀಡಾ ಪಂದ್ಯಾವಳಿಗಳಲ್ಲಿನ ೨೦೨೧ರ ಜನವರಿ ೧ ರಿಂದ ೨೦೨ರ ಡಿಸೆಂಬರ್ ೩೧ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು.

ಅರ್ಜಿಗಳನ್ನು ಕ್ರೀಡಾ ಇಲಾಖೆಯಿಂದ ಪಡೆದು ಜನವರಿ ೧೫ ರೊಳಗೆ ನಗರದ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. ೦೮೨೭೨-೨೨೮೯೮೫ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.