ಮುಳ್ಳೂರು, ಡಿ. ೨೯ : ಸಮೀಪದ ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಬಿ.ಕೆ. ಪುನಿತ್ ಜ. ೫ ರಿಂದ ೯ವರೆಗೆ ಕೇರಳದ ಕೊಟ್ಟಾಯಂನಲ್ಲಿ ನಡೆಯಲಿರುವ ದಕ್ಷಿಣ ವಲಯದ ಅಂತರ ವಿಶ್ವವಿದ್ಯಾನಿಲಯ ಪುರುಷರ ಫುಟ್ಬಾಲ್ ಪಂದ್ಯಾವಳಿಯ ಆಯ್ಕೆ ಸಮಿತಿಯ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ ಎಂದು ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ಪ್ರಕಟಣೆ ತಿಳಿಸಿದೆ.