ಶನಿವಾರಸಂತೆ, ಡಿ. ೨೯: ಸರಕಾರ ಮಕ್ಕಳ ಸುರಕ್ಷತೆಗಾಗಿ ಹಲವಾರು ಕಾಯ್ದೆಗಳನ್ನು ಜಾರಿಗೆ ತಂದಿದ್ದು ಮಕ್ಕಳು ಹಾಗೂ ಪೋಷಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶನಿವಾರಸಂತೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್. ಪರಶಿವಮೂರ್ತಿ ಕರೆ ನೀಡಿದರು.

ಪಟ್ಟಣದ ಸುಪ್ರಜ ಗುರುಕುಲ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಮಕ್ಕಳ ಕಾಯ್ದೆ ಹಾಗೂ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳ ಕಾಯ್ದೆ ಎಲ್ಲಿಯೂ ಯಾರಿಂದಲೂ ದುರ್ಬಳಕೆ ಆಗಬಾರದು. ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಲು ೨೦೧೨ ರಲ್ಲಿ ಅಂದಿನ ಕೇಂದ್ರ ಸರಕಾರ ಪೋಕ್ಸೋ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಕಾಯ್ದೆ ಬಗ್ಗೆ ಪೋಷಕರು ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಸಮಸ್ಯೆ ಉಂಟಾದಾಗ ಸಮೀಪದ ಪೊಲೀಸ್ ಠಾಣೆಯ ೧೧೨ ಸಂಖ್ಯೆಗೆ ಉಚಿತ ಕರೆ ಮಾಡಿ ತಿಳಿಸಬೇಕು ಎಂದರು.

ಪೊಲೀಸ್ ಸಿಬ್ಬಂದಿ, ವಿದ್ಯಾಸಂಸ್ಥೆ ಪ್ರಾಂಶುಪಾಲೆ ಡಿ. ಸುಜಲಾದೇವಿ, ಶಿಕ್ಷಕರು, ಕಾರ್ಯದರ್ಶಿ ಗುರುಪ್ರಸಾದ್ ಉಪಸ್ಥಿತರಿದ್ದರು.