ಸೋಮವಾರಪೇಟೆ,ಡಿ.೨೮: ಇಲ್ಲಿನ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಜ. ೪ರಂದು ಪೂರ್ವಾಹ್ನ ೧೧ ಗಂಟೆಗೆ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎ. ಪೃಥ್ವಿ ತಿಳಿಸಿದ್ದಾರೆ.

ನೂತನ ಕಟ್ಟಡವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಜಲಜಾ ಶೇಖರ್ ವಹಿಸಲಿದ್ದು, ಸಭಾ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಲಿದ್ದಾರೆ. ಭದ್ರತಾ ಕೊಠಡಿಯನ್ನು ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಆಭರಣ ವಿಭಾಗವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಹಾಗೂ ಕೌಂಟರ್ ವಿಭಾಗವನ್ನು ಮಾಜಿ ಅಧ್ಯಕ್ಷ ಬಿ.ಡಿ. ಮಂಜುನಾಥ್ ಉದ್ಘಾಟಿಸಲಿದ್ದಾರೆ.