ಮಡಿಕೇರಿ, ಡಿ. ೨೯: ಗಂಗಾ ಕಲ್ಯಾಣ ಯೋಜನೆಯಡಿ ೨೦೧೫ ರಿಂದ ೨೦೨೦ ರವರೆಗಿನ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಫಲಾನುಭವಿಗಳಿಗೆ ಕೊರೆಸಲಾದ ಕೊಳವೆ ಬಾವಿಗಳಿಗೆ ಸಂಬAಧಿಸಿದAತೆ ಪರಿಶೀಲನೆಗೆ ರಚಿಸಲಾಗಿರುವ ಕರ್ನಾಟಕ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿ ತಂಡವು ಜನವರಿ ೪ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದೆ.
ಜನವರಿ ೪ ರಂದು ಬೆಳಿಗ್ಗೆ ೧೦ ರಿಂದ ೧೧ ಗಂಟೆಯವರೆಗೆ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೊರೆಸಲಾದ ಕೊಳವೆ ಬಾವಿಗಳಿಗೆ ಸಂಬAಧಿಸಿದAತೆ ಬಂದಿರುವ ದೂರುಗಳ ಬಗ್ಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಯಲಿದೆ.
ಬೆಳಿಗ್ಗೆ ೧೧ ರಿಂದ ೧೨ ಗಂಟೆಯವರೆಗೆ ಕೊಡಗು ಜಿಲ್ಲೆಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ರೈತರ ಜಮೀನಿನಲ್ಲಿ ಕೊರೆಸಲಾದ ಕೊಳವೆ ಬಾವಿಗಳ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
ಗಂಗಾ ಕಲ್ಯಾಣ ವಿಶೇಷ ಸದನ ಸಮಿತಿಯ ಅಧ್ಯಕ್ಷರಾದ ಡಾ. ವೈ.ಎ. ನಾರಾಯಣಸ್ವಾಮಿ, ಸದಸ್ಯರಾದ ಬಸವರಾಜ ಪಾಟೀಲ್ ಇಟಗಿ, ಎಸ್.ರವಿ, ಎಂ.ಎ.ಗೋಪಾಲಸ್ವಾಮಿ, ಎಂ.ಪಿ. ಸುನೀಲ್ ಸುಬ್ರಮಣಿ, ನಿರಾಣಿ ಹಣಮಂತ ರುದ್ರಪ್ಪ, ಕಾಂತರಾಜು (ಬಿಎಂಎಲ್), ಬಿ.ಎಂ. ಫಾರೂಖ್, ಪ್ರತಾಪ್ ಸಿಂಹ ನಾಯಕ್ ಇವರು ಸಮಿತಿಯಲ್ಲಿ ಇದ್ದಾರೆ.