ನಾಪೋಕ್ಲು, ಡಿ. ೨೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ ವಲಯದ ಹಾಲುಗುಂದ ನವೋದಯ ಜ್ಞಾನವಿಕಾಸ ಕೇಂದ್ರದ ೧೦ನೇ ವಾರ್ಷಿಕೋತ್ಸವ ಸಮಾರಂಭ ಬೈರಂಬಾಡ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆಯಿತು.
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪದ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ, ಗ್ರಾಮೀಣ ಭಾಗದಲ್ಲಿ ಇಂತಹ ಪರಿಕಲ್ಪನೆಯ ಕಾರ್ಯಕ್ರಮವೂ ಅತ್ಯಂತ ಅವಶ್ಯಕವಾಗಿ ಬೇಕಾಗಿದೆ. ನೈತಿಕ ತಳಹದಿಯ ಹೊರತಾಗಿ ಯಾವುದೇ ಸಾಸ್ಥö್ಯ ಸಮಾಜದ ನಿರ್ಮಾಣ ಅಸಾಧ್ಯವಾಗಿದೆ. ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಈ ನಿಟ್ಟಿನಲ್ಲಿ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ದಮಯಂತಿ ವಲಯದ ಮೇಲ್ವಿಚಾರಕರಾದ ರತ್ನ ಮೈಪಾಲ, ಸೇವಾ ಪ್ರತಿನಿಧಿ ದೇವಕಿ, ಮೀನಾಕ್ಷಿ ಹಾಗೂ ಒಕ್ಕೂಟದ ಅಧ್ಯಕ್ಷ ಪದಾಧಿಕಾರಿಗಳು ನವೋದಯ ಜ್ಞಾನವಿಕಾಸ ಕೇಂದ್ರದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಕೇಂದ್ರ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಜ್ಞಾನವಿಕಾಸ ಸಮನ್ವಯಾಧಿಕಾರಿ ಕುಮಾರಿ ಶ್ರೇಯಾ ಆರ್ ಕಾರ್ಯಕ್ರಮವನ್ನು ನಿರೂಪಿಸಿ, ಸೇವಾಪ್ರತಿನಿಧಿ ಮೀನಾಕ್ಷಿ ವಂದಿಸಿದರು.
- ದುಗ್ಗಳ