ಮಡಿಕೇರಿ, ಡಿ.೨೮ : ಕೊಡಗು ಜಿಲ್ಲಾ ವಿಷ್ಣು ಸೇನಾ ಸಮಿತಿ ವತಿಯಿಂದ ತಾ.೩೦ ರಂದು ನಟ ಡಾ.ವಿಷ್ಣುವರ್ಧನ್ ಅವರ ೧೨ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಜಿಲ್ಲಾ ಕಾರ್ಯದರ್ಶಿ ಹೆಚ್.ಎಸ್. ನಾಗರಾಜ್ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಅಶ್ವಿನಿ ಆಸ್ಪತ್ರೆಯ ಸಭಾಂಗಣದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ರಫೀಕ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಶವಗಳ ಮರಣೋತ್ತರ ಪರೀಕ್ಷೆಯಲ್ಲಿ ತೊಡಗಿಸಿಕೊಳ್ಳುವ ಸಿಬ್ಬಂದಿಗಳು, ಅನಾಥ ಶವಗಳನ್ನು ಸಾಗಿಸುವ ಚಾಲಕರು ಹಾಗೂ ಕೋವಿಡ್ ವಾರಿಯರ್ಸ್ಗಳಾಗಿ ಸೇವೆ ಸಲ್ಲಿಸಿದ ಮಹಿಳೆಯರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು.