ಸೋಮವಾರಪೇಟೆ,ಡಿ.೨೮: ಗ್ರಾಮೀಣ ಭಾಗದಿಂದಲೂ ಭಾರತೀಯ ಜನತಾ ಪಾರ್ಟಿಯ ಸಂಘಟನೆಯನ್ನು ಬಲಗೊಳಿಸಲು ಮೋರ್ಚಾಗಳು ಮುಂದಾಗಬೇಕೆAದು ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ ಕರೆ ನೀಡಿದರು.

ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಪ್ರತಿ ಮನೆಗೂ ತಲುಪಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ ಎಂದರು.

ಕೇAದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹತ್ತು ಹಲವು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ಕೋವಿಡ್ ಸಂದರ್ಭ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದೆ. ಇದರೊಂದಿಗೆ ದೇಶವಾಸಿಗಳಿಗೆ ಉಚಿತವಾಗಿ ಲಸಿಕೆಗಳನ್ನು ನೀಡಿದೆ. ರಾಜ್ಯ ಸರ್ಕಾರವೂ ಸಹ ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ನೀಡುತ್ತಿದ್ದು, ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಓಬಿಸಿ ಮೋರ್ಚಾ ಅಧ್ಯಕ್ಷ ಮಾಲಂಬಿ ಗಂಗಾಧರ್ ಮಾತನಾಡಿ, ಸಂಘಟನೆಯ ವತಿಯಿಂದ ಕೈಗೊಳ್ಳಲಾದ ಸಮಾಜಮುಖಿ ಕಾರ್ಯಕ್ರಮಗಳ ವಿವರ ಒದಗಿಸಿದರು. ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್‌ಕುಮಾರ್, ಮೋಹನ್‌ದಾಸ್, ಉಪಾಧ್ಯಕ್ಷ ಸೋಮೇಶ್, ಸತೀಶ್, ರಮೇಶ್, ರುಕ್ಮಿಣಿ, ಕಾರ್ಯದರ್ಶಿ ಸುಬ್ರಮಣಿ, ಶ್ರೀನಿಧಿ ಲಿಂಗಪ್ಪ, ವಿನೀಶ್ ಸೇರಿದಂತೆ ಕಾರ್ಯಕಾರಿಣಿ ಸಮಿತಿ ಸದಸ್ಯರು ಭಾಗವಹಿಸಿದ್ದರು.