ಮಡಿಕೇರಿ, ಡಿ. ೨೯: ಪ್ರಸಕ್ತ (೨೦೨೧-೨೨) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಪ್ರವೇಶಕ್ಕೆ ಕಾಲಾವಕಾಶ ನೀಡಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ:- ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ. ರೂ.೨.೫೦ ಲಕ್ಷ, ಪ್ರವರ್ಗ-೨ಎ,೨ಬಿ,೩ಎ,೩ಬಿ,ಇತರೆ ಹಿಂದುಳಿದ ವರ್ಗ ರೂ.೧ ಲಕ್ಷ ಆಗಿದೆ. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ ೩ ಕೊನೆ ದಿನವಾಗಿದೆ. ವಿವರಗಳಿಗೆ ಇಲಾಖಾ ವೆಬ್‌ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜ.hosಣeಟs@ಞಚಿಡಿಟಿಚಿಣಚಿಞಚಿ.gov.iಟಿ ಗೆ ಇ-ಮೇಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಹಾಯವಾಣಿ ದೂರವಾಣಿ ಸಂಖ್ಯೆ: ೦೮೦-೮೦೫೦೩೭೦೦೦೬ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮತ್ತು ತಾಲ್ಲೂಕು ಮಟ್ಟದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಜಿಲ್ಲಾ ಕಚೇರಿ ಮಡಿಕೇರಿ ಮೊ.ಸಂಖ್ಯೆ ೯೪೪೮೨೦೫೯೧೯, ಮಡಿಕೇರಿ ತಾಲೂಕು ಕಚೇರಿ ಮೊ.ಸಂಖ್ಯೆ: ೯೪೮೦೩೫೬೪೦೯, ವಿರಾಜಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ: ೯೮೮೬೯೨೯೩೯೪, ಸೋಮವಾರಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ: ೮೬೬೦೦೧೯೦೪೨ಗೆ ಕರೆ ಮಾಡಿ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.