ಮೂರ್ನಾಡು, ಡಿ. ೨೮: ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅತಿಥಿಗಳಾಗಿ ಬಡುವಂಡ ಕನ್ನು ಅಪ್ಪಚ್ಚು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ನಿಂತ ನೀರಾಗದೆ ಸದಾ ಹರಿಯುತ್ತಿರಬೇಕು, ಆಗ ಮಾತ್ರ ಜ್ಞಾನ ವೃದ್ಧಿಸಲು ಸಾಧ್ಯ ಎಂದರು.
ಸAಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ಸಂಸ್ಥೆಯ ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಸಂಸ್ಥೆಯ ನಿರ್ದೇಶಕ ನಂದೇಟಿರ ರಾಜಾ ಮಾದಪ್ಪ, ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಹಾಜರಿದ್ದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ಅತ್ಯುತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪಾರಿತೋಷಕ ನೀಡುವ ಮೂಲಕ ಸನ್ಮಾನಿಸಲಾಯಿತು.