ಮಡಿಕೇರಿ, ಡಿ. ೨೯: ತುಳುವೆರ ಜನಪದ ಕೂಟದ ಅಂಗ ಸಂಸ್ಥೆ ಜನಪದ ಪತ್ತಿನ ಸಹಕಾರ ಸಂಘದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಗೋಣಿಕೊಪ್ಪಲು ಉಮಾಮಹೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದಲ್ಲಿ ನೂತನವಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಮಂಡೇಪAಡ ಸುಜಾ ಕುಶಾಲಪ್ಪ ಇವರನ್ನು ತುಳುವೆರಕೂಟ ಮತ್ತು ಜನಪದ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿ¸ Àಲಾಯಿತು. ಶಾಸಕ ಕೆ.ಜಿ. ಬೋಪಯ್ಯ, ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಜನಪದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶೇಖರ್ ಭಂಡಾರಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಚೈತ್ರ ಬಿ. ಚೇತನ್, ತುಳುವೆರ ಜನಪದ ಕೂಟದ ಅಧ್ಯಕ್ಷ ಬಿ.ಬಿ.ಐತ್ತಪ್ಪ ರೈ, ಪ್ರಧಾನ ಕಾರ್ಯದರ್ಶಿ ಪಿ.ಎಂ. ರವಿ, ಉಪಾಧ್ಯಕ್ಷ ಬಿ.ವೈ. ಆನಂದ ರಘು, ವೀರಾಜಪೇಟೆ ಮತ್ತು ಪೊನ್ನಂಪೇಟೆ ಅಕ್ರಮ - ಸಕ್ರಮ ಸಮಿತಿ ಅಧ್ಯಕ್ಷ ಗಿರೀಶ್ ಗಣಪತಿ, ಜನಪದ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಕೆ.ಜಿ. ರಾಮಕೃಷ್ಣ, ನಿರ್ದೇಶಕರುಗಳಾದ ಬಿ.ಎಸ್. ಪುರುಷೋತ್ತಮ, ಪಿ.ಎಸ್. ಮಂಜುನಾಥ್, ಬಿ. ಶಿವಪ್ಪ, ಸಂದ್ಯಾಗಣೇಶ್‌ರೈ, ಗೌತಮ್ ಶಿವಪ್ಪ, ಭವ್ಯ ಆರ್., ತುಳುಕೂಟದ ಸ್ಥಾಪಕ ಸಂಘಟಕ ಹರೀಶ್ ಆಳ್ವ ಸೇರಿದಂತೆ ತುಳುವೆರೆ ಜನಪದ ಕೂಟದ ಪ್ರಮುಖರು ಇದ್ದರು.