ಮಡಿಕೇರಿ, ಡಿ. ೨೯: ವೆಸ್ಟನ್ ಹಾಗೂ ಬ್ಯಾರಿ ವಾರಿಯರ್ಸ್ ಸ್ಪೋರ್ಟ್ಸ್ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ಜನವರಿ ೧೫ ರಿಂದ ೧೭ ರವರೆಗೆ ನಾಲ್ಕನೇ ವರ್ಷದ ಮಡಿಕೇರಿ ಪ್ರೀಮಿಯರ್ ಲೀಗ್ (ಎಂ.ಪಿ.ಎಲ್.) ಪಂದ್ಯಾವಳಿ ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಕಬೀರ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ. ವಿಜೇತ ತಂಡಕ್ಕೆ ರೂ. ೧ ಲಕ್ಷ ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ. ೫೦ ಸಾವಿರ ನಗದು ಹಾಗೂ ಟ್ರೋಫಿ ನೀಡಿ ಗೌರವಿಸಲಾಗುವುದು. ಪಂದ್ಯಾವಳಿಗೆ ೧೦ ತಂಡದ ಮಾಲೀಕರು ಸಜ್ಜಾಗಿದ್ದು, ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ಜ. ೪ ರಂದು ನಗರದ ಲೀ ಕೂರ್ಗ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕ್ಲಬ್‌ನ ಕಾರ್ಯದರ್ಶಿ ಇದ್ರೀಸ್, ಖಜಾಂಚಿ ಸಂಮ್ನನ್, ಸದಸ್ಯ ಹನೀಫ್ ಉಪಸ್ಥಿತರಿದ್ದರು.